ದಿಲ್ಲಿ ಹಿಂಸಾಚಾರ ಖಂಡಿಸಿ ರಾಜಭವನಕ್ಕೆ ಮುತ್ತಿಗೆ ಯತ್ನ: ಸಿಎಫ್ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ

Update: 2020-02-27 13:11 GMT

ಬೆಂಗಳೂರು, ಫೆ.27: ದಿಲ್ಲಿಯಲ್ಲಿ ಕೆಲ ದಿನಗಳಿಂದ ನಡೆಯುತ್ತಿರುವ ಹಿಂಸಾಚಾರ ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುರುವಾರ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ದಿಲ್ಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿ, ಕೇಂದ್ರ ಸರಕಾರ ಹಾಗೂ ದಿಲ್ಲಿ ಪೊಲೀಸರ ವಿರುದ್ಧ ಘೋಷಣೆ ಕೂಗುತ್ತಾ ರಾಜಭವನದ ಬಳಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳು ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ಪಡೆದಿರಲಿಲ್ಲ. ಏಕಾಏಕಿ ರಾಜಭವನದ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಬಳಿಕ ರಾಜಭವನಕ್ಕೂ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News