ಉಡುಪಿ: ಫೆ.28ರಿಂದ ಸರಕಾರಿ ನೌಕರರ ಕ್ರೀಡಾಕೂಟ

Update: 2020-02-27 15:43 GMT

ಉಡುಪಿ, ಫೆ.27: 2019-20ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಫೆ.28ರಿಂದ ಮಾರ್ಚ್ 1ರವರೆಗೆ ಧಾರವಾಡ ಜಿಲ್ಲೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಧಾರವಾಡ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆಸಲಾದ ಉಡುಪಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಭಾಗವಹಿಸುತಿದ್ದಾರೆ.ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆ ಯಿಂದ ಆಯ್ಕೆಯಾದ ಸರಕಾರಿ ನೌಕರರು ಫೆ.28ರ ಬೆಳಗ್ಗೆ 8 ಗಂಟೆಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಧಾರವಾಡ ಇಲ್ಲಿ ವರದಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುವಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News