ಮಾ.1ಕ್ಕೆ ಶಿರಸಿಯಲ್ಲಿ ಸಪ್ತಪದಿ ವಿಚಾರ ಸಂಕಿರಣ

Update: 2020-02-27 15:44 GMT

ಉಡುಪಿ, ಫೆ.27: ಕರ್ನಾಟಕ ರಾಜ್ಯ ಮುಜರಾಯಿ, ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಎ.26 ಹಾಗೂ ಮೇ 25ರಂದು ನಡೆಯಲಿರುವ ಸಪ್ತಪದಿ-ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿಯಾಗಿ ಮಾ.1ರ ರವಿವಾರ ಬೆಳಗ್ಗೆ 10 ಗಂಟೆಗೆ ಶಿರಸಿ ತಾಲೂಕಿನ ಡಾ.ಬಿ. ಆರ್. ಅಂಬೇಡ್ಕರ ಭನದಲ್ಲಿ ವಿಚಾರ ಸಂಕಿರಣ ನಡೆಯಲಿದೆ

ಕಾರ್ಯಕ್ರಮವನ್ನು ಮುಜರಾಯಿ, ಮೀನುಗಾರಿಕಾ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ವಿಧಾನಸಬೆಯ ಸಬಾಧ್ಯಕ್ಷ ಹಾಗೂ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಣ್ಣಾ ಸಾಹೇಬ್, ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ, ಸಂಸದ ಅನಂತ ಕುಮಾರ ಹೆಗಡೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಮುಂತಾದವರು ಭಾಗವಹಿಸಲಿದ್ದಾರೆ.

ಡಾ.ಮಹರ್ಷಿ ಆನಂದ ಗುರೂಜೀ ಉಪನ್ಯಾಸ: ಸಪ್ತಪದಿ ಸರಳ ಸಾಮೂಹಿಕ ವಿವಾಹದ ಕುರಿತು ರಾಜ್ಯದ ಖ್ಯಾತ ಧಾರ್ಮಿಕ ಚಿಂತಕ ಹಾಗೂ ರಾಜ್ಯ ಧಾರ್ಮಿಕ ಪರಿಷತ್‌ನ ಸದಸ್ಯ ಡಾ.ಮಹರ್ಷಿ ಆನಂದ ಗುರೂಜೀ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಮುಜರಾಯಿ ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News