ಪಂಡಿತ ಸುಧಾಕರ ಚತುರ್ವೇದಿ ನಿಧನಕ್ಕೆ ಸಿಎಂ ಸಂತಾಪ

Update: 2020-02-27 17:25 GMT

ಬೆಂಗಳೂರು, ಫೆ. 27: ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ವೇದ ವಿದ್ವಾಂಸ ಸುಧಾಕರ ಚತುರ್ವೇದಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತುಮಕೂರಿನ ಕ್ಯಾತಸಂದ್ರದಲ್ಲಿ ಜನಿಸಿದ ಚತುರ್ವೇದಿ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಪ್ರತ್ಯಕ್ಷದರ್ಶಿಯಾಗಿದ್ದರು. ನಂತರ ಮಹಾತ್ಮ ಗಾಂಧೀಜಿಯವರ ಒಡನಾಟದಲ್ಲಿದ್ದು, ಸ್ವಾತಂತ್ರ ಹೋರಾಟದಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದರು ಎಂದು ಅವರು ಸ್ಮರಿಸಿದ್ದಾರೆ.

ಜೊತೆಗೆ ವೇದಗಳ ಅಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಂಡು, ವೇದ ಪ್ರಚಾರಕ್ಕಾಗಿ 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲೆಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News