ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-02-27 17:34 GMT

ಕುಂದಾಪುರ, ಫೆ. 27: ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಸಂತೋಷ್ ಪೂಜಾರಿ (35) ಎಂಬವರು ಫೆ. 27ರಂದು ಬೆಳಗ್ಗೆ ಕೋಡಿ ಎಂಬಲ್ಲಿರುವ ತನ್ನ ಬಾಡಿಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಮಾಸೆಬೈಲು: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಶೇಡಿಮನೆ ಗ್ರಾಮದ ಗುಡ್ಡೆಯಂಗಡಿ ನಿವಾಸಿ ಶಾಲಿನಿ (22) ಎಂಬವರು ಫೆ.27ರಂದು ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News