ಅನಗತ್ಯ ಇಲಾಖೆಗಳ ವಿಲೀನ ಅಥವಾ ರದ್ದು: ಕಂದಾಯ ಸಚಿವ ಆರ್.ಅಶೋಕ್

Update: 2020-02-28 14:48 GMT

ಕಲಬುರ್ಗಿ, ಫೆ. 28: ರಾಜ್ಯದಲ್ಲಿ ಅನಗತ್ಯ ಇಲಾಖೆಗಳನ್ನು ಪ್ರಮುಖ ಇಲಾಖೆಗಳೊಂದಿಗೆ ವಿಲೀನ ಅಥವಾ ರದ್ದು ಮಾಡುವ ಮೂಲಕ ಅಲ್ಲಿನ ಸಿಬ್ಬಂದಿ ಅಗತ್ಯವಿರುವ ಕಡೆಗಳಲ್ಲಿ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್‌ಸ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ. ಆದರೆ, ಅವರಿಗೆ ಹೆಚ್ಚು ಕೆಲಸವೇ ಇಲ್ಲ. ಹೀಗಾಗಿ ಅವರನ್ನು ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು ಎಂದರು.

ರಾಜ್ಯ ಸರಕಾರಕ್ಕೆ ಬರುವ ಪ್ರಸ್ತುತ ಒಟ್ಟು ಆದಾಯದ ಪೈಕಿ ಶೇ.60ರರಷ್ಟು ಸಿಬ್ಬಂದಿ ವೇತನಕ್ಕೆ ವೆಚ್ಚ ಮಾಡಲಾಗುತ್ತದೆ. ಸಿಬ್ಬಂದಿಯನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಮತ್ತು ಉಳಿದ ಹಣವನ್ನು ಅಭಿವೃದ್ಧಿ ಕಾರ್ಯಕ್ಕೆ ಖರ್ಚು ಮಾಡಲು ಉದ್ದೇಶಿಸಲಾಗಿದೆ ಎಂದು ಅಶೋಕ್ ತಿಳಿಸಿದರು.

ರಾಜ್ಯದಲ್ಲಿನ ಹೊಸ ತಾಲೂಕುಗಳ ನೂತನ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಹಂತ-ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದ ಅವರು, ವೃದ್ಧಾಪ್ಯ ವೇತನವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ತೀರ್ಮಾನಿಸಲಾಗಿದೆ ಎಂದು ಇದೇ ವೇಳೆ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News