ಭೌತಿಕಗಿಂತಲೂ ಸಾಂಸ್ಕೃತಿಕ ಸಂಪತ್ತು ಶ್ರೇಷ್ಟ: ಪೇಜಾವರ ಶ್ರೀ

Update: 2020-02-28 16:17 GMT

 ಉಡುಪಿ, ಫೆ.28: ತಲೆತಲಾಂತರದಿಂದ ಸಂಸ್ಕೃತಿಯನ್ನು ನಮ್ಮ ಸಂಪತ್ತೆಂದು ಪರಿಗಣಿಸಲಾಗಿದೆ. ಭೌತಿಕ ಸಂಪತ್ತಿಗಿಂತಲೂ ಸಾಂಸ್ಕೃತಿಕ ಸಂಪತ್ತು ಶ್ರೇಷ್ಟ ವಾದುದು. ನಮ್ಮನ್ನು ನಾವು ತಿದ್ದಿಕೊಳ್ಳುತ್ತ ಈ ವೌಲ್ಯಾಧರಿತ ಸಂಸ್ಕೃತಿಯನ್ನು, ಸಾಂಸ್ಕೃತಿಕ ಸಂಪತ್ತನ್ನು ಉಳಿಸಿ ಬೆಳೆಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಸುಮನಸಾ ಕೊಡವೂರು ವತಿಯಿಂದ ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ರಂಗಹಬ್ಬ-8ರ ನಾಲ್ಕನೆಯ ದಿನವಾದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಸಾಹಿತಿ ಪೂರ್ಣಿಮಾ ಜನಾರ್ದನ್ ವಹಿಸಿದ್ದರು. ಈ ಸಂದರ್ಭದಲ್ಲಿ ಹಿರಿಯ ಯಕ್ಷಗುರು ಬಡಾನಿಡಿಯೂರು ಕೇಶವ ರಾವ್ ಅವರನ್ನು ರಂಗಸಾಧಕ ಗೌರವ ನೀಡಿ ಸನ್ಮಾನಿಸಲಾಯಿತು. ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ, ಉದ್ಯಮಿಗಳಾದ ನಾಗರಾಜ್ ಸುವರ್ಣ, ರಾಮಚಂದ್ರ ಕರ್ಕೇರ, ಪ್ರಗತಿಪರ ಕೃಷಿಕ ಸದಾನಂದ ಶೇರಿಗಾರ ಮುಖ್ಯ ಅತಿಥಿಗಳಾಗಿದ್ದರು.

ವೇದಿಕೆಯಲ್ಲಿ ಸುಮನಸಾ ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು, ಕಾರ್ಯದರ್ಶಿ ಜೀವನ್ ಕುಮಾರ್ ಉಪಸ್ಥಿತರಿದ್ದರು. ಚಂದ್ರಕಾಂತ್ ಕಲ್ಮಾಡಿ ಸ್ವಾಗತಿಸಿದರು. ಆರನ್ ಡಿಸೋಜ ವಂದಿಸಿದರು. ಅಕ್ಷತ್ ಅಮೀನ್ ಕಾರ್ಯಕ್ರಮ ನಿರೂಪಿಸಿ ದರು. ಬಳಿಕ ಸುಮನಸಾ ತಂಡದಿಂದ ಗದಾಯು್ಧ ಯಕ್ಷಗಾನ ಪ್ರದರ್ಶನ ಗೊಂಡಿತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News