ಸೋನಿಯಾ, ರಾಹುಲ್ ವಿರುದ್ಧ ಎಫ್ಐಆರ್ ದಾಖಲಿಸಲು ಕೋರಿ ಮನವಿ: ಕೇಂದ್ರ, ದಿಲ್ಲಿ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2020-02-28 17:17 GMT

ಹೊಸದಿಲ್ಲಿ, ಫೆ. 28: ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರಕ್ಕೆ ದಿಲ್ಲಿ ಉಚ್ಚ ನ್ಯಾಯಾಲಯ ಶುಕ್ರವಾರ ನೋಟಿಸು ಜಾರಿ ಮಾಡಿದೆ.

ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಆಪ್ ಶಾಸಕ ಅಮಾನತುಲ್ಲಾ ಖಾನ್, ಎಐಎಂಎಂ ನಾಯಕರಾದ ವಾರ್ಸಿ ಪಠಾಣ್ ಹಾಗೂ ಅಕ್ಬರುದ್ದೀನ್ ಉವೈಸಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಸಲ್ಲಿಸಲಾದ ಪ್ರತ್ಯೇಕ ಮನವಿ ಕುರಿತು ಗೃಹ ಸಚಿವಾಲಯ, ದಿಲ್ಲಿ ಸರಕಾರ ಹಾಗೂ ಪೊಲೀಸರಿಗೆ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಹಾಗೂ ನ್ಯಾಯಮೂರ್ತಿ ಸಿ. ಹರಿಶಂಕರ್ ಅವರನ್ನು ಒಳಗೊಂಡ ಪೀಠ ನೋಟಿಸು ಜಾರಿ ಮಾಡಿದೆ.

 ಎಫ್‌ಐಆರ್ ದಾಖಲಿಸುವುದರೊಂದಿಗೆ ದ್ವೇಷ ಭಾಷಣದ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಕೂಡ ಲಾಯರ್ಸ್‌ ವಾಯ್ಸ್ ತನ್ನ ಮನವಿಯಲ್ಲಿ ಹೇಳಿದೆ. ನಿರ್ದಿಷ್ಟ ರಾಜಕೀಯ ನಾಯಕರ ದ್ವೇಷ ಭಾಷಣಕ್ಕೆ ಸಂಬಂಧಿಸಿ ಗುರುವಾರ ಹಲವು ಮನವಿಗಳನ್ನು ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News