ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಮಾ.11ಕ್ಕೆ ವಿಧಾನಸೌಧ ಚಲೋ

Update: 2020-02-28 17:45 GMT

ಬೆಂಗಳೂರು, ಫೆ.28: ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಅನುಷ್ಠಾನಗೊಳಿಸಲು ವರದಿಯನ್ನು ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿ ಮಾ.11 ರಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ವಿಧಾನಸೌಧ ಮುತ್ತಿಗೆ ಚಳವಳಿ ಹಮ್ಮಿಕೊಳ್ಳಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಬಿ.ನರಸಪ್ಪ, ಸಮಾಜದಲ್ಲಿನ ತಳ ಸಮುದಾಯಗಳ ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಾನಮಾನಗಳನ್ನು ನೀಡದೆ ಕಡೆಗಣಿಸಲಾಗುತ್ತದೆ ಎಂದು ಹೇಳಿದರು.

ಜನಸಂಖ್ಯೆಯಾಧಾರಿತ ಒಳಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗವು ತನ್ನ ವರದಿಯಲ್ಲಿ ಶಿಫಾರಸ್ಸು ಮಾಡಿದೆ. ಹೀಗಾಗಿ ಈ ವರದಿ ಅನುಷ್ಠಾನಗೊಳಿಸಲು ಹಲವಾರು ಹೋರಾಟಗಳನ್ನು ನಡೆಸಲಾಗಿದೆ. ಆದರೂ ಕೂಡ ಅನುಷ್ಠಾನಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾದಿಗ ಸಮುದಾಯವನ್ನು ಎಲ್ಲ ಪಕ್ಷಗಳು ಮತಬ್ಯಾಂಕ್ ಆಗಿ ಉಪಯೋಗಿಸುತ್ತಿದೆ. ಈ ಎಲ್ಲಾ ನಿಟ್ಟಿನಲ್ಲಿ ಮಾದಿಗ ದಂಡೋರ ಉದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವಂತೆ ಮಾಡಲು ಈ ವರದಿಯನ್ನು ಅನುಷ್ಠಾನಗೊಳಿಸಬೇಕೆಂದು ವಿಧಾನಸೌಧ ಮುತ್ತಿಗೆ ಚಳುವಳಿ ಹಮ್ಮಿಕೊಂಡಿದ್ದೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News