ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲೂ ಭಾರತದ ಬ್ಯಾಟ್ಸ್‌ಮನ್‌ಗಳ ಪರೇಡ್

Update: 2020-02-29 04:37 GMT

ಕ್ರೈಸ್ಟ್‌ಚರ್ಚ್ : ಅತಿಥೇಯ ನ್ಯೂಝಿಲೆಂಡ್ ವಿರುದ್ಧದ ಮೊದಲ ಕ್ರಿಕೆಟ್ ಟೆಸ್ಟ್‌ನಲ್ಲಿ ಹೀನಾಯ ಸೋಲು ಕಂಡಿರುವ ಭಾರತೀಯ ಕ್ರಿಕೆಟ್ ತಂಡ ಎರಡನೇ ಟೆಸ್ಟ್‌ನ ಮೊದಲ ದಿನವೇ ಆರಂಭಿಕ ಕುಸಿತ ಕಂಡಿದೆ.

ಥಿಮ್ ಸೌತಿ ನೇತೃತ್ವದ ನ್ಯೂಝಿಲೆಂಡ್ ಬೌಲರ್‌ಗಳ ಶಿಸ್ತಿನ ದಾಳಿಗೆ ತತ್ತರಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳು ಮತ್ತೊಮ್ಮೆ ಪೆವಿಲಿಯನ್ ಪರೇಡ್ ನಡೆಸಿದ್ದಾರೆ.

ಅಗ್ರ ಕ್ರಮಾಂಕದ ನಾಲ್ವರು ಬ್ಯಾಟ್ಸ್‌ಮನ್‌ಗಳನ್ನು ಕಳೆದುಕೊಂಡಿರುವ ಭಾರತ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಇತ್ತೀಚಿನ ವರದಿಗಳು ಬಂದಾಗ ಭಾರತ 4 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತ್ತು. 40 ರನ್ ಗಳಿಸಿದ ಚೇತೇಶ್ವರ ಪೂಜಾರ ಹಾಗೂ 9 ರನ್ ಗಳಿಸಿದ ಹನುಮ ವಿಹಾರಿ ಕ್ರೀಸ್‌ನಲ್ಲಿದ್ದಾರೆ.

30 ರನ್‌ಗಳಾಗುವಷ್ಟರಲ್ಲೇ ಆರಂಭಿಕ ಆಟಗಾರ ಮಯಾಂಕ್ ಅಗರ್‌ವಾಲ್ (7) ಅವರ ವಿಕೆಟ್ ಕಳೆದುಕೊಂಡ ಭಾರತಕ್ಕೆ ಮತ್ತೊಬ್ಬ ಆರಂಭಿಕ ಆಟಗಾರ ಪೃಥ್ವಿ ಶಾ (54) ಆಸರೆಯಾದರು. ಆದರೆ ಆಟದ ಲಯ ಕಂಡುಕೊಂಡ ಶಾ ಅವರನ್ನು ಲ್ಯಾಥಮ್ ಪೆವಿಲಿಯನ್‌ಗೆ ಕಳುಹಿಸುವಲ್ಲಿ ಯಶಸ್ವಿಯಾದರು. ಕೇವಲ 33 ರನ್ ಅಂತರದಲ್ಲಿ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡ ಭಾರತ ಮತ್ತೆ ಸಂಕಷ್ಟಕ್ಕೆ ಸಿಲುಕಿತು.

ಥಿಮ್ ಸೌಥಿ (32ಕ್ಕೆ 2) ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯವರನ್ನು ಎಲ್‌ಬಿಡಬ್ಲ್ಯು ಬಲೆಗೆ ಕೆಡವಿದರೆ, ಮತ್ತೊಬ್ಬ ಅನುಭವಿ ಆಟಗಾರ ಅಜಿಂಕ್ಯ ರೆಹಾನೆ, ಸೌಥಿ ಎಸೆತದಲ್ಲಿ ರಾಸ್ ಟೇಲರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News