ತಡೆಗೋಡೆ ಸಹಿತ ಭೂ ಕುಸಿತ ಪ್ರಕರಣ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ - ಸಚಿವ ಬಸವರಾಜ

Update: 2020-02-29 05:48 GMT

ಮಂಗಳೂರು, ಫೆ. 29: ನಗರದ ಕರಂಗಲ್ಪಾಡಿ ಸಮೀಪ ಹೊಟೇಲ್ ಕಟ್ಟಡದ ನಿರ್ಮಾಣ ಕಾಮಗಾರಿ ವೇಳೆ ತಡೆಗೋಡೆ ಸಹಿತ ಭೂಮಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಹೇಳಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೃತರಿಗೆ ಕಾರ್ಮಿಕ ಇಲಾಖೆಯಿಂದ ಸಚಿವರು ಈಗಾಗಲೇ ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಬಿಲ್ಡರ್ ಹಾಗೂ ಸ್ಟ್ರಕ್ಚರಲ್ ಇಂಜಿನಿಯರ್‌ಗೆ ಶೋಕಾಸು ನೋಟೀಸು ನೀಡಲಾಗಿದೆ. ಬಿಲ್ಡರ್ ಕೂಡಾ ಮೃತ ಕಾರ್ಮಿಕರ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಅವರಿಂದ ಪರಿಹಾರವನ್ನು ಪಡೆದು ಕಾರ್ಮಿಕರಿಗೆ ಒದಗಿಸುವಂತೆಯೂ ಪಾಲಿಕೆ ಆಯುಕ್ತರಿಗೆ ನಿರ್ದೇಶಿಸಲಾಗಿದೆ ಎಂದರು.

ಶಾಸಕರಾದ ಡಾ. ಭರತ್ ಶೆಟ್ಟಿ, ಮಾಜಿ ಮೇಯರ್ ಭಾಸ್ಕರ್ ಕೆ., ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹಾಗೂ ಜಂಟಿ ಆಯುಕ್ತ ಡಾ. ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News