ವನಿತೆಯರ ಟ್ವೆಂಟಿ-20 ವಿಶ್ವಕಪ್: ಭಾರತ ಸೆಮಿ ಫೈನಲ್‌ಗೆ

Update: 2020-02-29 07:33 GMT

ಮೆಲ್ಬೋರ್ನ್, ಫೆ.29: ರಾಧಾ ಯಾದವ್ ಜೀವನಶ್ರೇಷ್ಠ ಬೌಲಿಂಗ್(4-23) ಹಾಗೂ ಶೆಫಾಲಿ ವರ್ಮಾ ಅವರ ಬಿರುಸಿನ ಬ್ಯಾಟಿಂಗ್(47,34 ಎಸೆತ)ಸಹಾಯದಿಂದ ಭಾರತದ ಮಹಿಳಾ ತಂಡ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಸದೆಬಡಿಯಿತು. ಈ ಗೆಲುವಿನ ಮೂಲಕ ಸೆಮಿ ಫೈನಲ್ ಪ್ರವೇಶಿಸಿತು.

ಶನಿವಾರ ಇಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಜಯಿಸಿದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 113 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕಿ ಜಯಾಂಗಿನಿ(33) ತಂಡದ ಪರ ಗರಿಷ್ಠ ಸ್ಕೋರ್ ಗಳಿಸಿದರು.

ಗೆಲ್ಲಲು ಸುಲಭ ಸವಾಲು ಪಡೆದ ಭಾರತ 14.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿತು. ಶೆಫಾಲಿ ವರ್ಮಾ ಸರ್ವಾಧಿಕ ಸ್ಕೋರ್ ಗಳಿಸಿದರೆ, ಜೆಮಿಮಾ ರೋಡ್ರಿಗಸ್ ಹಾಗೂ ದೀಪ್ತಿ ಶರ್ಮಾ ತಲಾ 15 ರನ್ ಗಳಿಸಿದರು.

ರಾಧಾ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News