×
Ad

ಬ್ಲಾಕ್ ಮಾಡಿರುವ 285 ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಅವಕಾಶ

Update: 2020-02-29 21:24 IST

ಮಂಗಳೂರು, ಫೆ.29: ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ 2015-16, 2016-17, 2017-18 ನೇ ಸಾಲಿನಲ್ಲಿ ದ.ಕ. ಜಿಲ್ಲೆಯ 10 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬ್ಲಾಕ್ ಮಾಡಲಾದ 285 ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.

ಆದ್ದರಿಂದ ಮನೆ ಮಂಜೂರಾಗಿ ಬ್ಲಾಕ್ ಮಾಡಲಾಗಿರುವ ಮನೆಗಳ ಫಲಾನುಭವಿಗಳು ಮಾ.14ರೊಳಗೆ ಕಾಮಗಾರಿ ಪ್ರಾರಂಭಿ ಸಿದ್ದಲ್ಲಿ ಅಂತಹ ಮನೆಗಳಿಗೆ ವಿವಿಧ ಹಂತಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಹಣ ಬಿಡುಗಡೆ ಮಾಡಲಿದ್ದು, ಆಯ್ಕೆಯಾದ ಫಲಾನುಭವಿಗಳು ಮನೆ ಕಟ್ಟಬಹುದಾಗಿದೆ.

ಒಂದು ವೇಳೆ ಫಲಾನುಭವಿಗಳು ತಮ್ಮ ಮನೆಗಳ ಕಾಮಗಾರಿಯನ್ನು ಪ್ರಾರಂಭಿಸದಿದ್ದರೆ ಅಥವಾ ಜಿಪಿಎಸ್ ಕಾರ್ಯವನ್ನು ನಿಗದಿತ ಸಮಯದಲ್ಲಿ ಮೊಬೈಲ್ ಆ್ಯಪ್ ಮೂಲಕ ಮಾಡದಿದ್ದಲ್ಲಿ ಅಂತಹ ಫಲಾನುಭವಿಗಳನ್ನು ಪಟ್ಟಿಯಿಂದ ಶಾಶ್ಚತವಾಗಿ ರದ್ದುಗೊಳಿಸಲಾಗುವುದು. ಮಾಹಿತಿಗಾಗಿ ನಗರ ಸ್ಥಳೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News