ಮಾ.1: ಮಂಗಳೂರಿಗೆ ತೀಸ್ತಾ ಸೆಟಲ್ವಾದ್
Update: 2020-02-29 21:25 IST
ಮಂಗಳೂರು, ಫೆ.29: ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾದ್ ಮಾ.1ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:05ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗಮಿಸುವ ಅವರು 10:20ಕ್ಕೆ ನಗರದ ರೋಶನಿ ನಿಲಯದಲ್ಲಿ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಅಪರಾಹ್ನ 2 ಗಂಟೆಗೆ ಕುತ್ತಾರ್ ಸಮೀಪದ ಮದನಿ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆಯುವ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.