ಮಾ.2ರಿಂದ ಮಿಷನ್ ಇಂದ್ರಧನುಷ್ 4ನೇ ಹಂತ
ಉಡುಪಿ, ಫೆ.29: ಜಿಲ್ಲೆಯಲ್ಲಿ ತೀವ್ರತರ ಮಿಷನ್ ಇಂದ್ರಧನುಷ್ ಕಾರ್ಯಕ್ರಮಮ ಮಾರ್ಚ್ 2ರಿಂದ 11ರವವರೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಬೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 3ನೇ ಹಂತದ ಇಂದ್ರಧನುಷ್ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಶೇ.98.11 ಸಾಧನೆ ಆಗಿದ್ದು, 4ನೇ ಹಂತದಲ್ಲಿ ಲಸಿಕೆ ವಂಚಿತವಾಗಿರುವ 19 ಮಕ್ಕಳು ಹಾಗೂ 6 ಮಂದಿ ಗರ್ಣಿಯರನ್ನು ಗುರುತಿಸಿ, ಇವರಿಗೆ ಲಸಿಕೆ ನೀಡುವ ಮೂಲಕ ಸಂಪೂರ್ಣ ಗುರಿ ಸಾಧಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸದಾಶಿವ ಪ್ರಭು ಸೂಚಿಸಿದರು.
ಲಸಿಕೆ ನೀಡುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಇಲ್ಲವಾಗಿದ್ದು, ಸಾರ್ವಜನಿಕರು ಅನಗತ್ಯ ವದಂತಿಗಳಿಗೆ ಕಿವಿಗೊಡದೆ ತಮ್ಮ ಮಕ್ಕಳಿಗೆ ಲಸಿಕೆ ಯನ್ನು ಕೊಡಿಸುವಂತೆ ತಿಳಿಸಿದ ಅಪರ ಜಿಲ್ಲಾದಿಕಾರಿಗಳು ಸಂಬಂದಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂ.ಜಿ.ರಾಮ, ಅರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆ ಗಳ ಅಧಿಕಾರಿಗಳು ಉಪಸ್ಥಿತರಿದ್ದರು.