×
Ad

ಮಾ.2ರಿಂದ ವಿಧಾನಸೌಧ ಸುತ್ತ ನಿಷೇಧಾಜ್ಞೆ

Update: 2020-02-29 23:37 IST

ಬೆಂಗಳೂರು, ಫೆ.29: ವಿಧಾನಸಭೆ ಬಜೆಟ್‌ಅಧಿವೇಶನದ ಹಿನ್ನೆಲೆಯಲ್ಲಿ ಮಾ.2ರಿಂದ ಮಾ.31ರವರೆಗೆ ವಿಧಾನಸೌಧ ಸುತ್ತ ಎರಡು ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ಅಧಿವೇಶನ ಹಿನ್ನೆಲೆ ವಿವಿಧ ಸಂಘಟನೆಗಳು, ಪಕ್ಷಗಳು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಹಾಕುವ ಸಾಧ್ಯತೆ ಇದೆ. ಇದರಿಂದ ಕಲಾಪಗಳಿಗೆ ಅಡ್ಡಿಯಾಗಲಿದ್ದು, ಸುಗಮ ಸಂಚಾರಕ್ಕೂ ತೊಂದರೆ ಆಗುವ ಸಾ್ಯತೆ ಬಗ್ಗೆ ಗುಪ್ತಚರ ಮಾಹಿತಿಯಿದೆ.

ಅಧಿವೇಶನ ಸುಗಮವಾಗಿ ಸಾಗಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಾ.2ರಿಂದ ಬೆಳಗ್ಗೆ 6 ಗಂಟೆಯಿಂದ ಮಾ.31ರ ಮಧ್ಯರಾತ್ರಿ 12 ಗಂಟೆಯವರೆಗೆ ಅಧಿವೇಶನ ನಡೆಯುವ ದಿನಗಳಂದು ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News