ದಿಲ್ಲಿಯಲ್ಲಿ ಇನ್ನೂ 3 ಶವ ಪತ್ತೆ: ಸಾವಿನ ಸಂಖ್ಯೆ 45ಕ್ಕೇರಿಕೆ

Update: 2020-03-01 17:46 GMT

ಹೊಸದಿಲ್ಲಿ,ಫೆ.1: ಈಶಾನ್ಯ ದಿಲ್ಲಿಯಲ್ಲಿ  ರವಿವಾರ ಇನ್ನೂ ಮೂರು ಅಪರಿಚಿತ ಶವಗಳು ಪತ್ತೆಯಾಗಿದ್ದು, ಇದರೊಂದಿಗೆ ಕಳೆದ ಒಂದು ವಾರದಿಂದ ಈ ಪ್ರದೇಶದಲ್ಲಿ ನಡೆದ ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 45ಕ್ಕೇರಿದೆ. ಅದಾಗ್ಯೂ ಈಶಾನ್ಯ ದಿಲ್ಲಿಯಾದ್ಯಂತ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಇಂದು ಯಾವುದೇ ಅಹಿತಕರ ಘಟನೆ ನಡೆದಿರುವ ಬಗ್ಗೆ ವರದಿಯಾಗಿಲ್ಲ.

''ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಈಶಾನ್ಯ ದಿಲ್ಲಿ ಜಿಲ್ಲೆಯಲ್ಲಿ ಸಮರ್ಪಕ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು ಸ್ಥಳೀಯರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಹಾಗೂ ಅವರಲ್ಲಿ ಆತ್ಮವಿಶ್ವಾಸವನ್ನು ನಿರ್ಮೀಸಲು ಯತ್ನಿಸಲಾಗುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಈಶಾನ್ಯ ದಿಲ್ಲಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲವೆಂದು ಅವರು ಹೇಳಿದ್ದಾರೆ. ಜನತೆ ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಕೂಡದೆಂದು ಹಾಗೂ ವದಂತಿಗಳನ್ನು ಹರಡುವವರ ವಿರುದ್ಧ ಪೊಲೀಸರಿಗೆ ದೂರು ನೀಡುವಂತೆ ಅವರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News