ಪರಿಷ್ಕತ ಉದರದರ್ಶಕ ಶಸ್ತ್ರಚಿಕಿತ್ಸೆ ಶಿಬಿರ
ಮಂಗಳೂರು, ಮಾ.2: ದ.ಕ. ಜಿಲ್ಲೆಯಲ್ಲಿ 2020ನೇ ಮಾರ್ಚ್ ತಿಂಗಳಲ್ಲಿ ವಿವಿಧೆಡೆ ಉದರದರ್ಶಕ ಶಸ್ತ್ರಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಮಾ.7ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಮಾ.9ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಮಾ.10 ಪುತ್ತೂರು ತಾಲೂಕಿನ ಸರರ್ಕಾರಿ ಆರೋಗ್ಯ ಕೇಂದ್ರ ಕಡಬ, ಮಾ.11ರಂದು ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದೆ.
ಮಾ.13ರಂದು ಬಂಟ್ವಾಳ ತಾಲೂಕು ಆಸ್ಪತ್ರೆ, ಮಾ.17ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಮಾ.18ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ, ಮಾ.20ರಂದು ಮಂಗಳೂರು ತಾಲೂಕಿನ ಸರಕಾರಿ ಆರೋಗ್ಯ ಕೇಂದ್ರ ಮೂಡುಬಿದಿರೆ, ಮಾ.21ರಂದು ಬಂಟ್ವಾಳ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, ಮಾಣಿಯಲ್ಲಿ ಶಸ್ತ್ರಚಿಕಿತ್ಸೆ ಶಿಬಿರ ನಡೆಯಲಿದೆ.
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟನೆ ತಿಳಿಸಿದೆ.