×
Ad

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ: ಸಮ್ಮೇಳನಾಧ್ಯಕ್ಷೆ ವೈದೇಹಿಗೆ ಅಧಿಕೃತ ಆಮಂತ್ರಣ

Update: 2020-03-02 21:51 IST

ಉಡುಪಿ, ಮಾ.2: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಾ.14 ಮತ್ತು 15ರಂದು ಹಂಗಾರಕಟ್ಟೆ ಚೇತನ ಪ್ರೌಢಶಾಲೆಯಲ್ಲಿ ನಡೆಯಲಿ ರುವ ಉಡುಪಿ ಜಿಲ್ಲಾ 14ನೆ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವ ಸಾಹಿತಿ ವೈದೇಹಿ ಅವರಿಗೆ ಅವರ ಮಣಿಪಾಲದ ಇರುವಂತಿಗೆ ನಿವಾಸದಲ್ಲಿ ಇಂದು ಅಧಿಕೃತವಾಗಿ ಆಮಂತ್ರಣ ಪತ್ರಿಕೆ ನೀಡಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನೇತೃತ್ವದಲ್ಲಿ ಸಮಿತಿಯ ಸದಸ್ಯರು ಅಧಿಕೃತವಾಗಿ ಆಮಂತ್ರಣ ಪತ್ರಿಕೆ ನೀಡಿ, ವೈದೇಹಿ ಹಾಗೂ ಅವರ ಪತಿ ಕೆೆ.ಎಲ್.ಶ್ರೀನಿವಾಸಮೂರ್ತಿ ಅವರನ್ನು ಸನ್ಮಾನಿಸಿದರು.

ಸರಸ್ವತಿ ಬಾಯಿ ರಾಜವಾಡೆ ವೇದಿಕೆಯಲ್ಲಿ ಎರಡು ದಿನಗಳ ಕಾಲ 16 ವೈವಿಧ್ಯಮಯ ಹಂತಗಳಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ, ಜಾನಪದ, ಕಲಾಸಾಹಿತ್ಯಗಳಿಗೆ ಪೂರಕವಾಗಿ ಜರುಗಲಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿ ಯಾಗಿ ನಡೆಸಿಕೊಂಡುವಂತೆ ವಿನಂತಿಸಿಕೊಳ್ಳಲಾಯಿತು.

ಗೌರವ ಸ್ವೀಕರಿಸಿ ಮಾತನಾಡಿದ ವೈದೇಹಿ, ಸಮ್ಮೇಳನದ ಸರ್ವಾಧ್ಯಕ್ಷತೆ ನೀಡಿ ಗೌರವಿಸಿದ್ದಕ್ಕಾಗಿ ಉಡುಪಿ ಜಿಲ್ಲಾ ಕಸಾಪ ಘಟಕದ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿ, ಸರ್ವರ ಸಹಭಾಗಿತ್ವದಲ್ಲಿ ಜಿಲ್ಲಾ ಸಮ್ಮೇಳನ ಸ್ಮರಣೀಯವಾಗಿ ಜರುಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಕಾಪು ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಸಂಘಸಂಸ್ಥೆಗಳ ಪ್ರತಿನಿಧಿ ಭುವನಪ್ರಸಾದ್ ಹೆಗ್ಡೆ ಮೊದ ಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News