×
Ad

ಖಾಲಿಯಿರುವ ವೈದ್ಯರ ನೇಮಕಕ್ಕೆ 9 ತಿಂಗಳ ಗಡುವು ವಿಧಿಸಿದ ಹೈಕೋರ್ಟ್

Update: 2020-03-02 21:56 IST

ಬೆಂಗಳೂರು, ಮಾ.2: ರಾಜ್ಯದ ಜಿಲ್ಲಾ, ತಾಲೂಕು ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು 2020ರ ನ.30ರೊಳಗೆ ಭರ್ತಿ ಮಾಡಲು ಹೈಕೋರ್ಟ್ ಗಡುವು ವಿಧಿಸಿದೆ. 

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಹಂತ ಹಂತವಾಗಿ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಪ್ರಧಾನ ಕಾರ್ಯದರ್ಶಿಗೆ ನ್ಯಾಯಪೀಠವು ನಿರ್ದೇಶನ ನೀಡಿತು.

ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ವಿಶೇಷ ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು, ಆರೋಗ್ಯ ಸಹಾಯಕರು ಮತ್ತು ಅಕೌಂಟೆಂಟ್‌ಗಳು ಮತ್ತು ಡೇಟಾ ಆಪರೇಟರ್‌ಗಳಂತಹ ಇತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News