ಪೆರ್ಡೂರು: ಸಾಲಬಾಧೆಯಿಂದ ರೈತ ಆತ್ಮಹತ್ಯೆ

Update: 2020-03-02 16:33 GMT

ಹಿರಿಯಡ್ಕ, ಮಾ.2: ಕೃಷಿಗಾಗಿ ಮಾಡಿರುವ ಸಾಲವನ್ನು ತೀರಿಸಲು ಸಾಧ್ಯವಾಗದೆ ರೈತರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆರ್ಡೂರು ಗ್ರಾಮದ ಮೂಡುಜೆಡ್ಡು ಎಂಬಲ್ಲಿ ನಡೆದಿದೆ.

ಮೃತರನ್ನು ಮೂಡುಜೆಡ್ಡುವಿನ ಗುಂಡು ನಾಯ್ಕ್(58) ಎಂದು ಗುರುತಿಸ ಲಾಗಿದೆ. ಇವರು ತೋಟ ಹಾಗೂ ಕೃಷಿ ಕೆಲಸ ಮಾಡಿಕೊಂಡಿದ್ದು, ಕೃಷಿಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಆದರೆ ಕೃಷಿಯಲ್ಲಿ ಸರಿಯಾದ ಆದಾಯ ಬಾರದೆ, ಅವರಿಗೆ ಸಾಲ ತೀರಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಇದೇ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಅವರು, ಫೆ.28ರಂದು ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗದ್ದೆಗೆ ಹಾಕುವ ಕೀಟ ನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ತೀವ್ರವಾಗಿ ಅಸ್ವಸ್ಥಗೊಂಡ ಅವರು, ಮಾ.1 ರಂದು ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News