ಸಿಇಟಿ ಪರೀಕ್ಷೆ: ವಿದ್ಯಾರ್ಥಿಗಳ ಮೇಲ್ಮನವಿ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ- ಹೈಕೋರ್ಟ್
Update: 2020-03-02 22:16 IST
ಬೆಂಗಳೂರು, ಮಾ.2: ಸಾಗರೋತ್ತರ ಭಾರತೀಯ ನಾಗರಿಕ(ಒಸಿಐ) ವಿದ್ಯಾರ್ಥಿಗಳು ಸಿಇಟಿ-2020ರ ಸಾಲಿನ ಪರೀಕ್ಷೆಗೆ ಹಾಜರಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಮೇಲ್ಮನವಿ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಆದೇಶಿಸಿದೆ.
ಈ ಕುರಿತು ಪ್ರತೀಕ್ ನರೇಂದ್ರ ಕಾಮತ್ ಸೇರಿ 9 ಮಂದಿ ಸಲ್ಲಿಸಿದ್ದ ಅರ್ಜಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರವಿ ಮಳೀಮಠ ಹಾಗೂ ನ್ಯಾಯಮೂರ್ತಿ ಅಶೋಕ್ ಕಿಣಗಿ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ. ಒಸಿಐ ವಿದ್ಯಾರ್ಥಿಗಳು ವೈದ್ಯಕೀಯ, ದಂತ ವೈದ್ಯಕೀಯ ಪರೀಕ್ಷೆಗೆ ಹಾಜರಾಗಲು ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.