ಮಾ. 6ರಿಂದ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Update: 2020-03-03 07:59 GMT

ಮಂಗಳೂರು: ಸಂತ ಜೋಸೆಫ್ ಇಂಜಿನಿಯರಿಂಗ್  ಕಾಲೇಜಿನ (ಎಸ್‍ಜೆಇಸಿ) ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗವು ಲ್ಯಾಬ್ ಬೋಧಕರಿಗೆ ವಿಟಿಯು ಟೆಕ್ವಿಪ್ ಸೆಲ್ ಪ್ರಾಯೋಜಿತ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಮಾ.6 ಮತ್ತು  7ರಂದು  ಆಯೋಜಿಸಿದೆ.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಪಾಟ್ನಾದ ಆರ್ಯಭಟ್ಟ ಜ್ಞಾನ ವಿಶ್ವವಿದ್ಯಾಲಯ ಮತ್ತು ರೂರ್ಕೆಲಾದ ಬಿಜು ಪಟ್ನಾಯಕ್ ತಂತ್ರಜ್ಞಾನ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮವು ಇಲೆಕ್ಟ್ರಾನಿಕ್ ಉಪಕರಣಗಳು, ಸಾಫ್ಟ್ ವೇರ್ ಗಳ ಬದಲಿ, ಸ್ಥಾಪನೆ ಮತ್ತು ಉನ್ನತೀಕರಣದ ಸಮಯದಲ್ಲಿ ಅನುಸರಿಸಬೇಕಾದ ಕಾರ್ಯವಿಧಾನಗಳನ್ನು ಪರಿಚಯಿಸಲಿದ್ದು, ಸಂವಹನ ಕೌಶಲ್ಯ, ನಡವಳಿಕೆಯ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಪರಿಸರ ಸುರಕ್ಷತೆ, ಸಾರ್ವಜನಿಕ ಆರೋಗ್ಯ ಹಾಗೂ ಔದ್ಯೋಗಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ತಂತ್ರಗಳನ್ನು ಒಳಗೊಂಡಿರುತ್ತದೆ.

ಎಂಆರ್‍ಪಿಎಲ್, ಮಂಗಳೂರು, ಸಿಎಸ್‍ಜಿಐ, ಬೆಂಗಳೂರು, ಮಂಗಳೂರು ಸಿಟಿ ಕಾರ್ಪೊರೇಷನ್ ಮತ್ತು ಮೂಡಬಿದ್ರಿಯ ಎಸ್‍ಎನ್‍ಎಂ ಪಾಲಿಟೆಕ್ನಿಕ್‍ನ ನುರಿತ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ.

ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಚೇರಿಯನ್ನು ಸಂಪರ್ಕಿಸಬೇಕಾಗಿ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News