ಶಬ್ದಮಾಲಿನ್ಯದಿಂದ ಶ್ರವಣ ದೋಷ ಸಮಸ್ಯೆ: ಆರೋಗ್ಯಾಧಿಕಾರಿ ಡಾ.ಸೋಮಣ್ಣ

Update: 2020-03-03 13:47 GMT

ಗುಂಡ್ಲುಪೇಟೆ,ಮಾ,3: ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ವಿಶ್ವ ಶ್ರವಣ ದಿನಾಚರಣೆ ಆಚರಿಸಲಾಯಿತು.

ಈ ಅಂಗವಾಗಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಜಾಥಾವನ್ನು ಪ್ರಭಾರ ಆರೋಗ್ಯಾಧಿಕಾರಿ ಡಾ.ಸೋಮಣ್ಣ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶಬ್ದಮಾಲೀನ್ಯದಿಂದ ಶ್ರವಣ ದೋಷ ಸಮಸ್ಯೆ ಹೆಚ್ಚಾಗುತ್ತಿದೆ. ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಂಡರೆ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ದೊರೆಸ್ವಾಮಿ, ಅಂಕಪ್ಪ, ಪುಟ್ಟಸ್ವಾಮಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News