ದಕ್ಷಿಣ ಕೊರಿಯ: 5,000 ದಾಟಿದ ಕೊರೋನ ಸೋಂಕು ಪ್ರಕರಣ

Update: 2020-03-03 16:57 GMT

ಸಿಯೋಲ್ (ದಕ್ಷಿಣ ಕೊರಿಯ), ಮಾ. 3: ದಕ್ಷಿಣ ಕೊರಿಯದಲ್ಲಿ ಕೊರೋನ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ ಮಂಗಳವಾರ 5,000ವನ್ನು ದಾಟಿದೆ. ಚೀನಾದ ಹೊರಗೆ ಇದು ಅತಿ ಹೆಚ್ಚಿನ ಸಂಖ್ಯೆಯ ಸೋಂಕು ಪ್ರಕರಣಗಳಾಗಿವೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 477 ಪ್ರಕರಣಗಳು ದೃಢಪಟ್ಟಿವೆ.

ಸೋಂಕಿನಿಂದಾಗಿ ಕಳೆದ 24 ಗಂಟೆಗಳ ಅವಧಿಯಲ್ಲಿ ಇನ್ನೂ ಇಬ್ಬರು ಮೃತಪಟ್ಟಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 28ಕ್ಕೇರಿದೆ.

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕೊರಿಯದಲ್ಲಿ ಕೊರೋನವೈರಸ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಶಿನ್‌ಚಿಯೊಂಜಿ ಜೀಸಸ್ ಚರ್ಚ್ ಎಂಬ ಧಾರ್ಮಿಕ ಪಂಗಡಕ್ಕೆ ಸೇರಿದ 2,60,000ಕ್ಕೂ ಹೆಚ್ಚು ಜನರನ್ನು ಅಧಿಕಾರಿಗಳು ಈಗ ತಪಾಸಣೆಗೆ ಒಳಪಡಿಸಿದ್ದಾರೆ. ವರದಿಯಾಗಿರುವ ಪ್ರಕರಣಗಳ ಪೈಕಿ ಅರ್ಧಕ್ಕೂ ಹೆಚ್ಚು ಪ್ರಕರಣಗಳು ಈ ಪಂಗಡದ ಸದಸ್ಯರಲ್ಲೇ ಪತ್ತೆಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News