ಮುಸ್ಲಿಮರಿಗೆ ಮೀಸಲಾತಿ ಬಗ್ಗೆ ನಿರ್ಧರಿಸಿಲ್ಲ: ಉದ್ಧವ್ ಠಾಕ್ರೆ

Update: 2020-03-03 17:41 GMT

ಮುಂಬೈ, ಮಾ.3: ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಹೇಳಿದ್ದಾರೆ.

ವಿಧಾನಸಭೆಯ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ ಠಾಕ್ರೆ, ಇಂತಹ ಯಾವುದೇ ಪ್ರಸ್ತಾವ ಇದುವರೆಗೆ ಸರಕಾರದ ಮುಂದಿಲ್ಲ. ಈ ಪ್ರಸ್ತಾವ ಬಂದರೆ ಅದರ ಸಿಂಧುತ್ವವನ್ನು ಪರಿಶೀಲಿಸಲಾಗುವುದು. ಇದುವರೆಗೆ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.

 ಬಿಜೆಪಿ ಈ ವಿಷಯದ ಬಗ್ಗೆ ಅನಾವಶ್ಯಕ ಗದ್ದಲ ಎಬ್ಬಿಸುತ್ತಿದೆ. ಸರಕಾರದ ಮುಂದೆ ಈ ಪ್ರಸ್ತಾಪ ಇನ್ನೂ ಬಂದಿಲ್ಲ. ಈ ಬಗ್ಗೆ ಶಿವಸೇನೆ ಇನ್ನೂ ತನ್ನ ನಿಲುವು ಪ್ರಕಟಿಸಿಲ್ಲ ಎಂದವರು ಸ್ಪಷ್ಟಪಡಿಸಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿ ಕಲ್ಪಿಸಲು ಸರಕಾರ ನಿರ್ಧರಿಸಿದೆ. ಈ ಕುರಿತು ಈಗ ನಡೆಯುತ್ತಿರುವ ಅಧಿವೇಶನದಲ್ಲೇ ಮಸೂದೆ ಮಂಡಿಸಲಾಗುವುದು ಎಂದು ಕೆಲ ದಿನಗಳ ಹಿಂದೆ ರಾಜ್ಯದ ಅಲ್ಪಸಂಖ್ಯಾತ ವ್ಯವಹಾರ ಇಲಾಖೆಯ ಸಚಿವ ನವಾಬ್ ಮಲಿಕ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಠಾಕ್ರೆ ಪ್ರತಿಕ್ರಿಯಿಸುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News