ಮಾಜಿ ಸಚಿವರೊಬ್ಬರ ವಿರುದ್ಧ ಸ್ವಯಂಪ್ರೇರಿತ ಪಿಐಎಲ್ ದಾಖಲು: ಹೈಕೋರ್ಟ್

Update: 2020-03-04 04:47 GMT

ಬೆಂಗಳೂರು, ಮಾ.3: ಸರಕಾರಿ ಜಮೀನನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ವಿಚಾರದಲ್ಲಿ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ವಿರುದ್ಧ ಪಿಐಎಲ್‌ ದಾಖಲಿಸಿದ್ದ ಆರ್‌ಟಿಐ ಕಾರ್ಯಕರ್ತ ಹನುಮೇಗೌಡರಿಗೆ ಹೈಕೋರ್ಟ್ 25 ಸಾವಿರ ರೂ. ದಂಡ ವಿಧಿಸಿದೆ. ಹಾಗೂ ಜಮೀನು ಒತ್ತುವರಿ ಸಂಬಂಧ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಳ್ಳುವುದಾಗಿ ತಿಳಿಸಿದೆ.

ವಿಶ್ವ ಗಾಣಿಗರ ಸಮುದಾಯಕ್ಕೆ ಸರಕಾರ ಜಮೀನು ಮಂಜೂರು ಮಾಡಿದ ಕ್ರಮ ಪ್ರಶ್ನಿಸಿ ಆರ್‌ಟಿಐ ಕಾರ್ಯಕರ್ತ ಹನುಮೇಗೌಡ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌)ಯ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಅಶೋಕ್ ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

 ಅಧಿಕಾರ ದುರುಪಯೋಗಪಡಿಸಿಕೊಂಡು ಬಿ.ಜೆ.ಪುಟ್ಟಸ್ವಾಮಿ ಅವರು ವಿಶ್ವ ಗಾಣಿಗರ ಸಮುದಾಯಕ್ಕೆ ಜಮೀನು ಮಂಜೂರು ಮಾಡಿಸಿದ್ದಾರೆ ಎಂದು ಹನುಮೇಗೌಡ್‌ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬಿ.ಜೆ.ಪುಟ್ಟಸ್ವಾಮಿ ಅವರು ಹನುಮೇಗೌಡ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಕೋರ್ಟ್ ಹನುಮೇಗೌಡ್ ರಿಗೆ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪಿಐಎಲ್ ಹಾಕುವಾಗ ತಿಳಿಸಿರಲಿಲ್ಲ. ಹೀಗಾಗಿ, ಕೋರ್ಟ್ ಹನುಮೇಗೌಡ್ ರಿಗೆ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಬಿ.ಜೆ.ಪುಟ್ಟಸ್ವಾಮಿ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News