ವಿಚಾರಣೆಗೆ ಹಾಜರಾಗಲು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್

Update: 2020-03-04 07:47 GMT
ಫೈಲ್ ಫೋಟೊ

ಮಂಗಳೂರು, ಮಾ.4: ಮಂಗಳೂರು ಗೋಲಿಬಾರ್ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಮ್ಯಾಜಿಸ್ಟ್ರೀರಿಯಲ್ ವಿಚಾರಣೆಯು ನಗರದ ಎಸಿ ಕಚೇರಿ ಕೋರ್ಟ್ ನಲ್ಲಿ ಬುಧವಾರ ನಡೆಯಿತು.

ಉಡುಪಿ ಜಿಲ್ಲಾಧಿಕಾರಿಯೂ ಆಗಿರುವ ಮ್ಯಾಜಿಸ್ಟ್ರೀರಿಯಲ್ ತನಿಖಾಧಿಕಾರಿ ಜಗದೀಶ್ ವಿಚಾರಣೆ ನಡೆಸಿದರು. 176 ಸಾಕ್ಷಿಗಳ ಪೈಕಿ ಇಂದು ಎಸಿಪಿಗಳ ಸಹಿತ 29 ಪೊಲೀಸರು ಹಾಜರಾಗಿ ಸಾಕ್ಷ ನುಡಿದರು. ಮಾ.12ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷರಿಗೆ ಹಾಗೂ ಮಾ.9ಕ್ಕೆ ಹಾಜರಾಗುವಂತೆ ಡಿಸಿಪಿ ಅರುಣಾಂಶುಗಿರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಡಿ.19ರಂದು ನಡೆದ ಮಂಗಳೂರು ಗೋಲಿಬಾರ್ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಆರಂಭಿಸಿದ ಮ್ಯಾಜಿಸ್ಟ್ರೀರಿಯಲ್ ತನಿಖೆಯಲ್ಲಿ ಡಿ.31ರಂದು ಸ್ಥಳ ಮಹಜರು, ಜ.7, ಫೆ.6, ಫೆ.13ರಂದು ಸಾರ್ವಜನಿಕರ ಲಿಖಿತ ಸಾಕ್ಷಿ ಹೇಳಿಕೆ ಮತ್ತು ವಿಡಿಯೋ ದೃಶ್ಯಾವಳಿ ಸಲ್ಲಿಸಲು ಹಾಗೂ ಫೆ.25ರಂದು ಪೊಲೀಸರಿಗೆ ಖುದ್ದು ಸಾಕ್ಷ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಕಳೆದ ವರ್ಷದ ಡಿಸೆಂಬರ್ 19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಯ ಸಂದರ್ಭ ಮಂಗಳೂರು ನಗರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿತ್ತು. ಈ ವೇಳೆ ಸಂಭವಿಸಿದ ಹಿಂಸಾಚಾರ ಮತ್ತು ಗೋಲಿಬಾರ್‌ಗೆ ಇಬ್ಬರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News