ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವಂತೆ ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

Update: 2020-03-04 13:28 GMT

ಬೆಂಗಳೂರು, ಮಾ.4: ಮಾ.5ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವಂತೆ ಆಗ್ರಹಿಸಿ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. 

ಕೇರಳ ಸರಕಾರ ಬಜೆಟ್‌ನಲ್ಲಿ 900 ಕೋಟಿ ಶೈಕ್ಷಣಿಕ ಸಾಲ ಮನ್ನಾ ಮಾಡಿದ ಮಾದರಿಯಲ್ಲಿ ರಾಜ್ಯ ಸರಕಾರ ಶಿಕ್ಷಣದ ಶುಲ್ಕ ಪಾವತಿಗೆ ಶೈಕ್ಷಣಿಕ ಸಾಲ ಮಾಡಿರುವ ಎಲ್ಲ ವರ್ಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಶಿಕ್ಷಣ ತಜ್ಞ ಕೊಥಾರಿ ಆಯೋಗದ ಶಿಫಾರಸಿನಂತೆ ಬಜೆಟ್‌ನಲ್ಲಿ ಕನಿಷ್ಠ ಶೇ.30 ರಷ್ಟು ಹಣ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಅಲ್ಲದೇ, ರಾಜ್ಯದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರತಿ ದಿನದ ಮೂರು ಹೊತ್ತಿನ ಊಟಕ್ಕೆ ಕೇವಲ 50 ರೂ.ನಂತೆ ತಿಂಗಳಿಗೆ 1,600 ನೀಡಲಾಗುತ್ತಿದೆ. ಆಹಾರ ಪದಾರ್ಥಗಳು, ಗ್ಯಾಸ್, ಬೆಲೆ ಏರಿಕೆಯಾಗಿದ್ದರೂ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ತೆ ಹೆಚ್ಚಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ತೆ ಕನಿಷ್ಠ 3,500 ರೂ.ಗಳಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News