×
Ad

ಕೊರೋನ ವೈರಸ್ ನಿಯಂತ್ರಣ ಬಗ್ಗೆ ಅಗತ್ಯ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

Update: 2020-03-04 19:25 IST

ಉಡುಪಿ, ಮಾ.4: ಜಿಲ್ಲೆಯಲ್ಲಿ ಕೊರೋನ ವೈರಸ್ ನಿಯಂತ್ರಣ ಕುರಿತಂತೆ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಕರೋನ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಕರೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಬುವಾರಮಣಿಪಾಲದಲ್ಲಿರುವಜಿಲ್ಲಾಧಿಕಾರಿಕಚೇರಿಸಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಕರೋನ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಕರೆದ ತುರ್ತು ಸೆಯಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಕೊರೋನ ವೈರಸ್ ಶಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಎನ್95 ಮಾಸ್ಕ್ ಸೇರಿದಂತೆ ಸುರಕ್ಷತಾ ಉಪಕರಣಗಳನ್ನು ಸಿದ್ದವಾಗಿಟ್ಟುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಇನ್ನೂ ಹೆಚ್ಚಿನ ಅವಶ್ಯಕತೆಯಿದ್ದಲ್ಲಿ ಕೂಡಲೇ ಟೆಂಡರ್ ಕರೆದು ಖರೀದಿ ಮಾಡುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಕೊರೋನ ವೈರಸ್ ಕುರಿತಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತು ನಗರ ಪ್ರದೇಶದಲ್ಲಿ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚಿಸಿದ ಅವರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆ ಯರ ಮೂಲಕ ಮನೆ ಮನೆಗಳಿಗೆ ಅರಿವು ಮೂಡಿಸುವಂತೆ ಹಾಗೂ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಕೊರೋನ ವೈರಸ್ ನಿಯಂತ್ರಣ ಕುರಿತಂತೆ ಕಾರ್ಯ ನಿರ್ವಹಿಸಲು, ಸರಕಾರ ಸೂಚಿಸಿರುವ ವಿವಿಧ ಅಧಿಕಾರಿಗಳ ನೇತೃತ್ವದ ಸಮಿತಿಗಳನ್ನು ರಚಿಸುವಂತೆ ಹಾಗೂ ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಹಾಗೂ ಜಿಲ್ಲೆಯ ಪ್ರತಿದಿನದ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಜಿಲ್ಲೆಯಲ್ಲಿ ಕೊರೋನ ವೈರಸ್ ನಿಯಂತ್ರಣ ಕುರಿತಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅನಗತ್ಯ ವದಂತಿಗಳಿಂದ ಸಾರ್ವಜನಿಕರು ಭಯ ಭೀತರಾಗದಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ತಿಳಿಸಿದರು.

ಕೊರೋನ ವೈರಸ್ ಶಂಕಿತರಿಗೆ ಚಿಕಿತ್ಸೆ ನೀಡಲು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 5 ಬೆಡ್‌ಗಳ ಕೊಠಡಿಯನ್ನು ಮತ್ತು ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ 3 ಬೆಡ್ ಗಳ ಕೊಠಡಿಯನ್ನು ಕಾಯ್ದಿರಿಸಲಾಗಿದೆ. ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ವಾಸುದೇವ ಉಪಾದ್ಯಾಯ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ. ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಮಣಿಪಾಲ ಕೆಎಂಸಿಯ ವೈದ್ಯರು, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕರೋನ ವೈರಸ್ ಭಯ ಬೇಡ, ಎಚ್ಚರವಿರಲಿ

ನೊವಲ್ ಕರೋನ ವೈರಸ್ ಬಗ್ಗೆ ಇತ್ತೀಚೆಗೆ ಎಲ್ಲಡೆ ವ್ಯಾಪಕವಾಗಿ ಕೇಳಿಬರುತ್ತಿದ್ದು, ಇದೊಂದು ಹೊಸ ವೈರಸ್ ಪ್ರಬೇಧವಾಗಿದ್ದು, ಈ ಹಿಂದೆ ಮನುಷ್ಯರಲ್ಲಿ ಕಂಡು ಬಂದಿರಲಿಲ್ಲ. ತಜ್ಞರ ಪ್ರಕಾರ ಇದು ಪ್ರಾಣಿ ಪ್ರಬೇಧದಲ್ಲಿ ಹುಟ್ಟಿದ್ದು, ನಂತರ ಮನುಷ್ಯರಲ್ಲಿ ಹರಡಿದೆ. ಇದು ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು, ವೈರಸ್ ಪೀಡಿತ ವ್ಯಕ್ತಿಯಿಂದ(ಕೆಮ್ಮು ಅಥವಾ ಸೀನಿನ ಮೂಲಕ) ಅಥವಾ ಕಲುಷಿತ ಕೈಗಳಿಂದ ಅನ್ಯ ಕೊರೋನ ವೈರಸ್ ತಳಿಗಳು ಒಬ್ಬರಿಂದ ಒಬ್ಬರಿಗೆ ಹರಡಲಿವೆ.

ಪ್ರಾರಂಭದಲ್ಲಿ ತೀವ್ರ ಜ್ವರದೊಂದಿಗೆ ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿ ಈ ರೋಗದ ಲಕ್ಷಣಗಳಾಗಿವೆ. ವೈರಸ್ ಸೋಂಕಿದ 14 ದಿನಗಳ ನಂತರ ರೋಗದ ಲಕ್ಷಣಗಳು ಕಂಡುಬರುತ್ತವೆ. ರೋಗ ಲಕ್ಷಣಗಳು ಕಂಡು ಬಂದ ವ್ಯಕ್ತಿಯ ಮೂಗು, ಗಂಟಲಿನಸ್ರಾವದ ಲೇಪನ ಮತ್ತು ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ಸೋಂಕನ್ನು ದೃಡಪಡಿಸಿಕೊಳ್ಳಬಹುದು.

ಪ್ರಾರಂದಲ್ಲಿತೀವ್ರಜ್ವರದೊಂದಿಗೆನೆಗಡಿ,ಕೆಮ್ಮು,ಉಸಿರಾಟದತೊಂದರೆಹಾಗೂೇದಿ ಈ ರೋಗದ ಲಕ್ಷಣಗಳಾಗಿವೆ. ವೈರಸ್ ಸೋಂಕಿದ 14 ದಿನಗಳ ನಂತರ ರೋಗದ ಲಕ್ಷಣಗಳು ಕಂಡುಬರುತ್ತವೆ. ರೋಗ ಲಕ್ಷಣಗಳು ಕಂಡು ಬಂದ ವ್ಯಕ್ತಿಯ ಮೂಗು, ಗಂಟಲಿನಸ್ರಾವದ ಲೇಪನ ಮತ್ತು ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ಸೋಂಕನ್ನು ದೃಡಪಡಿಸಿಕೊಳ್ಳಬಹುದು. ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿಯುವ ಮೂಲಕ ಮತ್ತು ನಿಮ್ಮ ಕೈಯನ್ನು ಆಗಾಗ ಚೆನ್ನಾಗಿ ತೊಳೆದುಕೊಳ್ಳುವ ಮೂಲಕ ಸರಳ ನೈರ್ಮಲ್ಯವನ್ನು ಅಭ್ಯಾಸ ಮಾಡಿಕೊಳ್ಳಬೇಕು. ಅನಾರೋಗ್ಯದಿಂದಿರುವ ಅಥವಾ ಕೆಮ್ಮು ಮತ್ತು ನೆಗಡಿ ಇತ್ಯಾದಿ ಅನಾರೋಗ್ಯದ ಲಕ್ಷಣಗಳು ಇರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಬೇಡಿ. ಪ್ರಾಣಿಗಳ ನೇರ ಸಂಪರ್ಕದಿಂದ ದೂರವಿದ್ದು, ಚೆನ್ನಾಗಿ ಬೇಯಿಸದ ಮಾಂಸ ಸೇವನೆ ಮಾಡಬೇಡಿ.

ಸದ್ಯಕ್ಕೆ ಈ ರೋಗಕ್ಕೆ ನಿಖರವಾದ ಚಿಕಿತ್ಸೆ ಇಲ್ಲವಾಗಿದ್ದು, ರೋಗದ ಲಕ್ಷಣ ಗಳಿಗೆ ಅನುಗುಣವಾಗಿ ಚಕಿತ್ಸೆ ನೀಡಲಾಗುತ್ತದೆ. ರೋಗ ಲಕ್ಷಣಗಳು ಕಂಡು ಬಂದಲ್ಲಿ ತ್ವರಿತವಾಗಿ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಆರೋಗ್ಯ ಕೇಂದ್ರಗಳನ್ನು ಅಥವಾ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News