×
Ad

ಉಡುಪಿ: ಅಂಡರ್‌ಗ್ರೌಂಡ್ ಟ್ಯಾಂಕ್ ನಿರ್ಮಾಣಕ್ಕೆ ಗುದ್ದಲಿಪೂಜೆ

Update: 2020-03-04 23:03 IST

ಉಡುಪಿ, ಮಾ.4: ಕಡೆಕಾರು ಗ್ರಾಪಂ ವ್ಯಾಪ್ತಿಯ ಕುತ್ಪಾಡಿ ಗ್ರಾಮಕ್ಕೆ ಕುಡಿಯುವ ನೀರಿನ ಅಗತ್ಯತೆಗಳಿಗಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅನುದಾನದಡಿ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ 2 ಲಕ್ಷ ಲೀಟರ್ ಸಂಗ್ರಹ ಸಾಮ್ಯರ್ಥ್ಯದ ಅಂಡರ್‌ಗ್ರೌಂಡ್ ಟ್ಯಾಂಕ್ ನಿರ್ಮಾಣಕ್ಕೆ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಇಂದು ಕಡೆಕಾರಿನ ನವಚೇತನ ಯುವಕ ಮಂಡಲದ ವಠಾರದಲ್ಲಿ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದಭರ್ದಲ್ಲಿ ಕಡೆಕಾರು ಗ್ರಾಮಪಂಚಾಯತ್ ಅಧ್ಯಕ್ಷ ರಘುನಾಥ್ ಕೋಟ್ಯಾನ್, ಗ್ರಾಪಂ ಉಪಾಧ್ಯಕ್ಷೆ ಮಾಲತಿ ಶೆಟ್ಟಿ, ಸದಸ್ಯರಾದ ರಾಘವೇಂದ್ರ ಕುತ್ಪಾಡಿ, ವೀಣಾ ಪ್ರಕಾಶ್, ನವಚೇತನ ಯುವಕ ಮಂಡಲದ ಅಧ್ಯಕ್ಷ ಸುಪ್ರೀತ್, ಮಹಿಳಾ ಮಂಡಲದ ಅಧ್ಯಕ್ಷೆ ಸುಶೀಲ, 11ನೇ ಬ್ಲಾಕ್ ಸಮಿತಿ ಅಧ್ಯಕ್ಷ ಶಿವಾನಂದ ಪೂಜಾರಿ, ನಾರಾಯಣ ಮೇಸ್ತ್ರಿ, ಅಶೋಕ್ ಮೇಸ್ತ್ರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News