ಉಡುಪಿ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
Update: 2020-03-04 23:12 IST
ಉಡುಪಿ, ಮಾ.4: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯು ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಆಸ್ಪತ್ರೆ ವಿಪತ್ತು ನಿರ್ವಹಣಾ ಯೋಜನೆ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶಾಲಾ ವಿಪತ್ತು ನಿರ್ವಹಣಾ ಯೋಜನೆ, ಮ್ಯಾಂಗ್ರೋ ಪ್ಲಾಂಟೇಷನ್ (ಕಡಲ್ಕೊರೆತ ತಗ್ಗಿಸಲು) ಮತ್ತು ಗ್ರಾಮ ಮಟ್ಟದಲ್ಲಿ ವಿಪತ್ತು ಪೂರ್ವ ಸಿದ್ಧತಾ ಯೋಜನೆಗಳ ಅನುಷ್ಠಆನದ ಕುರಿಂತೆ ಪ್ರಮುಖವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ. ಜಗದೀಶ್, ಸಿಇಓ ಪ್ರೀತಿ ಗೆಹ್ಲೋಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ.ರಾಜು, ಡಿಹೆಚ್‌ಓ ಡಾ. ಸುಧೀರ್‌ಚಂದ್ರ ಸೂಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಉಡುಪಿ ತಹಶೀಲ್ದಾರ್ ಪ್ರದೀಪ್ ಎಸ್ ಕುರುಡೇಕರ್, ಜಿಲ್ಲೆಯ ವಿಪತ್ತು ನಿರ್ವಹಣಾ ಪರಿಣಿತರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಳ ಅಧಿಕಾರಿಗಳು ಉಪಸ್ಥಿತರಿದ್ದರು.