×
Ad

ಎ.4ರಿಂದ ಉಡುಪಿಯಲ್ಲಿ ಸೇನಾ ನೇಮಕಾತಿ ರ್ಯಾಲಿ

Update: 2020-03-04 23:22 IST

ಮಂಗಳೂರು, ಮಾ.4: ಭಾರತೀಯ ಸೇನಾ ನೇಮಕಾತಿ ರ್ಯಾಲಿಯನ್ನು ಎಪ್ರಿಲ್ 4ರಿಂದ 14ರವರೆಗೆ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಬಾಗಲಕೋಟೆ, ವಿಜಯಪುರ, ಧಾರವಾಡ, ಚಿಕ್ಕಮಗಳೂರು, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಶಿವಮೊಗ್ಗ ಮತ್ತು ಉತ್ತರ ಕನ್ನಡದ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ www.JoinInadianarmy.nic.in ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ಆನ್‌ಲೈನ್‌ನಲ್ಲಿ ಅರ್ಜಿಯನ್ನು ನೋಂದಾಯಿಸಲು ಮಾ.20 ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ನೋಂದಾಯಿಸಿದ ಅಭ್ಯರ್ಥಿಗಳು ಮಾತ್ರ ರ್ಯಾಲಿಯಲ್ಲಿ ಭಾಗವಹಿಸಲು ಅನುಮತಿಸಲಾಗಿದೆ.

ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟೆಕ್ ನರ್ಸಿಂಗ್ ಅಸಿಸ್ಟೆಂಟ್ (ಎಎಂಸಿ)/ ನರ್ಸಿಂಗ್ ಸಹಾಯಕ ಪಶುವೈದ್ಯ, ಸೋಲ್ಜರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್ (ಆಲ್ ಆರ್ಮ್ಸ್), ಸೋಲ್ಜರ್ ಟ್ರೇಡ್‌ಮೆನ್ (ಆಲ್ ಆರ್ಮ್ಸ್), ಸೋಲ್ಜರ್ ಜನರಲ್ ಡ್ಯೂಟಿ (ಆಲ್ ಆರ್ಮ್ಸ್) 10 ನೇ ಪಾಸ್ ಮತ್ತು ಸೋಲ್ಜರ್ ಟ್ರೇಡ್‌ಮೆನ್ (ಆಲ್ ಆರ್ಮ್ಸ್) 8 ನೇ ಪಾಸ್ ಅವಶ್ಯ ಇರುತ್ತದೆ. ಮಾ.24ರ ನಂತರ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News