×
Ad

ಕೊರೋನ ವೈರಸ್ ಭೀತಿ: ಮೈಸೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ

Update: 2020-03-04 23:46 IST
ಸಾಂದರ್ಭಿಕ ಚಿತ್ರ

ಮೈಸೂರು, ಮಾ.4: ಇಡೀ ವಿಶ್ವವೇ ಕೊರೋನ ವೈರಸ್ ಮಹಾಮಾರಿಗೆ ಬೆಚ್ಚಿಬಿದ್ದಿದ್ದು, ನಮ್ಮ ದೇಶದಲ್ಲೂ ಕೊರೋನ ವೈರಸ್ ಸೋಂಕು ಕಾಣಿಸಿಕೊಂಡಿದೆ. ಈ ನಡುವೆ ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ಮೈಸೂರು ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಮೈಸೂರಿನಿಂದ ಕೇರಳ, ಗೋವಾಕ್ಕೆ ವಿಮಾನಗಳ ಸಂಚಾರ ಹಿನ್ನೆಲೆಯಲ್ಲಿ, ಕೊರೋನ ವೈರಸ್ ಬಗ್ಗೆ ಮೈಸೂರು ಮಂಡಕಳ್ಳಿ ವಿಮಾಣ ನಿಲ್ದಾಣದಲ್ಲಿ  ಮುಂಜಾಗ್ರತೆ ಕ್ರಮ ವಹಿಸಲಾಗಿದ್ದು, ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ವಿಮಾನ ನಿಲ್ದಾಣದಲ್ಲೂ ತುರ್ತು ಚಿಕಿತ್ಸಾ ಕೇಂದ್ರ ಆರಂಭ ಮಾಡಲಾಗಿದೆ.

ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ಏರ್ ಪೋರ್ಟ್ ಸಿಬ್ಬಂದಿ ಹಾಗೂ ಭದ್ರತಾ ಪೊಲೀಸರಿಗೆ ಮಾಸ್ಕ್ ಗಳನ್ನು ವಿತರಣೆ ಮಾಡಲಾಗಿದ್ದು ಸಿಬ್ಬಂದಿ ಹಾಗೂ ಪೊಲೀಸರು ಮಾಸ್ಕ್ ಧರಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಕೊರೋನ ವೈರಸ್ ಬಗ್ಗೆ ಏರ್ ಪೋರ್ಟ್ ನಲ್ಲಿ ಜಾಗೃತಿ ಫಲಕಗಳನ್ನು ಅಳವಡಿಕೆ ಮಾಡಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News