ಎಐಸಿಸಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಸಿದ್ದರಾಮಯ್ಯ ಆಪ್ತೆ ಐಶ್ವರ್ಯ

Update: 2020-03-04 18:33 GMT

ಮೈಸೂರು,ಮಾ.4: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಶಿಷ್ಯೆ ಐಶ್ವರ್ಯ ಮಂಚನಹಳ್ಳಿ ಮಹದೇವ್ ಅವರನ್ನು ಎಐಸಿಸಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಐಶ್ವರ್ಯ ಅತೀ ಕಿರಿಯ ವಯಸ್ಸಿನಲ್ಲಿಯೇ ಎಐಸಿಸಿ ಘಟಕದ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ಮೂಲತಃ ಮೈಸೂರು ಜಿಲ್ಲೆ ಕೆ.ಆರ್.ನಗರದವರಾದ ಇವರು ಮಾಜಿ ಶಾಸಕ ದಿವಂಗತ ಮಂಚನಹಳ್ಳಿ ಮಹದೇವ್ ಅವರ ಪುತ್ರಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡು ರಾಜಕೀಯ ಪಾದಾರ್ಪಣೆ ಮಾಡಿದ ಇವರು, ಈ ಹಿಂದೆ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ವಕ್ತಾರೆಯಾಗಿ ಕೆಲಸ ಮಾಡಿದ್ದರು.

ಇವರ ಪಕ್ಷ ನಿಷ್ಠೆ ಮತ್ತು ಕಾರ್ಯವೈಖರಿಯನ್ನು ಗಮನಿಸಿದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸೂಚನೆ ಮೇರೆಗೆ ಮಹಿಳಾ ಘಟಕದ ಅಧ್ಯಕ್ಷೆ ಸುಶ್ಮಿತಾ ದೇವ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News