ಪುತ್ತೂರು: ದೇವಳದ ಮುಂಬಾಗದಲ್ಲಿ ನಿಲ್ಲಿಸಿದ್ದ ಕಾರಿಗೆ ಹಾನಿ

Update: 2020-03-05 11:55 GMT

ಪುತ್ತೂರು, ಮಾ. 5: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರು ಭಾಗದಲ್ಲಿರುವ ಗದ್ದೆಯಲ್ಲಿ ನಿಲ್ಲಿಸಲಾಗಿದ್ದ ಕಾರೊಂದಕ್ಕೆ ಕಲ್ಲೆಸೆದು ಹಾನಿಗೊಳಿಸಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದೆ. ಕಲ್ಲೆಸೆದ ವ್ಯಕ್ತಿ ಮಾನಸಿಕ ಅಸ್ವಸ್ಥನೆಂದು ತಿಳಿದು ಬಂದಿದೆ.

ಕಾರಿಗೆ ಕಲ್ಲೆಸೆದು ಹಾನಿ ಮಾಡಿದ ವ್ಯಕ್ತಿಯನ್ನು ಗಣೇಶ ಎಂದು ಗುರುತಿಸಲಾಗಿದೆ. ಈತ ರಾತ್ರಿ ವೇಳೆಯಲ್ಲಿ ದೇವಳದ ಎದುರು ಭಾಗದಲ್ಲಿರುವ ಗದ್ದೆಯಲ್ಲಿ ನಿಲ್ಲಿಸಲಾಗಿದ್ದ ಮಾರುತಿ ಕಾರಿಗೆ ಕಲ್ಲೆಸೆದು ಕಾರಿನ ಹಿಂಬಾಗದ ಗಾಜು ಪುಡಿ ಮಾಡಿದ್ದಾನೆ. ಅಲ್ಲದೆ ಕಾರಿನ ಒಳಗೆ ದೊಡ್ಡ ಗಾತ್ರದ ಕಲ್ಲುಗಳನ್ನು ಎತ್ತಿ ಹಾಕಿದ್ದಾನೆ. ಇದನ್ನು ನೋಡಿದ ದೇವಳದ ಸೆಕ್ಯುರಿಟಿ ಮತ್ತು ಸಿಬ್ಬಂದಿಗಳು ಹಾಗೂ ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಅವರು ಈತನನ್ನು ತಡೆದಿದ್ದರು.

ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಠಾಣೆಗೆ ಕರೆದೊಯ್ದು ಬಲಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News