ಪುತ್ತೂರು: ಮಾ. 7ರಂದು ಕೊರೋನಾ ವೈರಸ್ ಸೋಂಕು ಕುರಿತ ಮಾಹಿತಿ ಶಿಬಿರ

Update: 2020-03-05 12:27 GMT

ಪುತ್ತೂರು, ಮಾ. 5: ಲಯನ್ಸ್ ಕ್ಲಬ್ ಪುತ್ತೂರು ಕಾವು ನೇತೃತ್ವದಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ ಕೊರೋನಾ ವೈರಸ್ ಸೋಂಕು ( ಕೋವಿಡ್ -19) ಕುರಿತ ಮಾಹಿತಿ ಶಿಬಿರವನ್ನು ಮಾ.7 ರಂದು ಪುತ್ತೂರಿನ ಕೊಂಬೆಟ್ಟು ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.

ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯಾಧಿಕಾರಿಗಳ ಕಚೇರಿ ಪುತ್ತೂರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು, ಪುತ್ತೂರು ತಾಲೂಕು ಯುವ ಬಂಟರ ಸಂಘ ಹಾಗೂ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಹಭಾಗ್ವಿತ್ವದಲ್ಲಿ ಈ ಮಾಹಿತಿ ಕಾರ್ಯಕ್ರಮ ನಡೆಯಲಿದ್ದು, ಪುತ್ತೂರು ನಗರದ ಸುತ್ತಮುತ್ತಲಿನ ವಿವಿಧ ಶಾಲೆಗಳ ಸುಮಾರು 1 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಾಗೃತಿಯ ಉದ್ದೇಶದಿಂದ ಲಭ್ಯವಿರುಷ್ಟು ಮಾಸ್ಕ್‍ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತದೆ ಎಂದರು.

ಮಾಹಿತಿ ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾಹಿತಿ ನೀಡಲಿದ್ದಾರೆ. ಕಾವು ಲಯನ್ಸ್ ಕ್ಲಬ್ ಅಧ್ಯಕ್ಷ ಹಾಗೂ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಅತಿಥಿಗಳಾಗಿ ದ.ಕ.ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ನಿಕಟಪೂರ್ವ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಿಕಂದರ್ ಪಾಶಾ, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ., ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ, ಲಯನ್ಸ್ 317 ಡಿ ಇದರ ಜಿಲ್ಲಾ ರಾಜ್ಯಪಾಲರ ಕಾರ್ಯಕ್ರಮದ ಮುಖ್ಯ ಸಂಯೋಜಕ ಗೋವರ್ಧನ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಯುವಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ, ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಲಯನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಸಾಂತ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News