×
Ad

ನೀರಿನ ತೊಟ್ಟಿಗೆ ಬಿದ್ದು 2 ವರ್ಷದ ಮಗು ಮೃತ್ಯು

Update: 2020-03-05 20:20 IST
ಸಾಂದರ್ಭಿಕ ಚಿತ್ರ

ದಾವಣಗೆರೆ, ಮಾ.5: ನೀರಿನ ತೊಟ್ಟಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಇಲ್ಲಿನ ಹೊಸ ಕುಂದುವಾಡ ಗ್ರಾಮದಲ್ಲಿ ಗುರುವಾರ ನಡೆದಿದೆ.

ಸಿದ್ದೇಶ್ (2) ಸಾವನ್ನಪ್ಪಿದ ಮಗು. ಮಂಜಮ್ಮ, ತಿಪ್ಪೇಶ್ ದಂಪತಿಯ ಪುತ್ರ ಸಿದ್ದೇಶ್ ಎದುರು ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಅಲ್ಲಿದ್ದ ನೀರಿನ ತೊಟ್ಟಿಗೆ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪೋಷಕರು ಮಗನನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.

ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News