ಮಾ.7ರಂದು ಮಹಿಳಾ ಸಾಂಸ್ಕೃತಿಕ ಉತ್ಸವ
Update: 2020-03-06 20:25 IST
ಉಡುಪಿ, ಮಾ.6: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ವತಿಯಿಂದ, ಬೊಮ್ಮರಬೆಟ್ಟು ಗ್ರಾಪಂನ ಸಹಕಾರದೊಂದಿಗೆ, ಪಂಜನಬೆಟ್ಟು ವಿದ್ಯಾವರ್ಧಕ ಸಂಘ ಹಾಗೂ ಅಮೋಘ (ರಿ) ಹಿರಿಯಡಕ ಇವರ ಸಹಯೋಗದೊಂದಿಗೆ ಮಹಿಳಾ ಸಾಂಸ್ಕೃತಿಕ ಉತ್ಸವವು, ಮಾ.7ರ ಸಂಜೆ 5 ಗಂಟೆಗೆ ಉಡುಪಿ ತಾಲೂಕಿನ ಬೊಮ್ಮರಬೆಟ್ಟು ಗ್ರಾಮದ ಪಂಜನಬೆಟ್ಟುವಿದ್ಯಾವರ್ಧಕ ಸಂಘದ ಪ್ರೌಢ ಶಾಲೆ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಉದ್ಘಾಟಿಸಲಿದ್ದು, ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷೆ ಸವಿತಾ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.