ವಿಶ್ವ ಶ್ರವಣ ದಿನದ ಮಾಹಿತಿ ಕಾರ್ಯಕ್ರಮ
Update: 2020-03-06 20:43 IST
ಉಡುಪಿ, ಮಾ.6: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮತ್ತು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮದ ಸಹಯೋಗ ದೊಂದಿಗೆ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿ ವಿಶ್ವ ಶ್ರವಣ ದಿನದ ಬಗ್ಗೆ ಮಾಹಿತಿ ಕಾರ್ಯಕ್ರಮ ಗುರುವಾರ ತೆಂಕನಿಡಿಯೂರು ಸಭಾಭವನದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಮಲ್ಪೆ ವಲಯದ ಅಧ್ಯಕ್ಷ ಸುಂದರ್ ಕಲ್ಮಾಡಿ, ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ. ರಾಮ್‌ರಾವ್ ಶ್ರವಣದೋಷದ ಬಗ್ಗೆ ಅರಿವನ್ನು ಮೂಡಿಸಿದರು.
ಉಡುಪಿ ಜಿಲ್ಲಾಸ್ಪತ್ರೆಯ ವಾಕ್ ಶ್ರವಣ ತಜ್ಞೆ ಅಕ್ಷತಾ ವಿ. ಮತ್ತು ಶ್ರವಣ ದೋಷವುಳ್ಳ ಮಕ್ಕಳ ಬೋಧಕಿ ಸೌಜನ್ಯ ಎಸ್. ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಸಾವಿತ್ರಿ ಮತ್ತು ಉಮಾ ವಂದಿಸಿದರು.