ಮಾ.7ರಂದು ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ
Update: 2020-03-06 21:53 IST
ಉಡುಪಿ, ಮಾ.6: ಎಂಜಿಎಂ ಕಾಲೇಜು ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ 2020ನೇ ಸಾಲಿನ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ ಮಾ.7ರಂದು ಬೆಳಗ್ಗೆ 10:30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಪಟದಲ್ಲಿ ನಡೆಯಲಿದೆ.
ಪ್ರಸಿದ್ಧ ವಿದ್ವಾಂಸ, ಯಕ್ಷಗಾನ ಅರ್ಥಧಾರಿಗಳಾದ ಮಂಗಳೂರಿನ ಡಾ.ಎಂ. ಪ್ರಭಾಕರ ಜೋಷಿ ಅವರಿಗೆ ಈ ಸಾಲಿನ ಪ್ರಶಸ್ತಿಯನ್ನು ನೀಡಿ ಗೌರವಿಸಲಾ ಗುವುದು. ಪ್ರೊ.ಬಿ.ಎ.ವಿವೇಕ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ಎಚ್. ಶಾಂತ ರಾಮ್ ಭಾಗವಹಿ ಸುವರು. ಪ್ರೊ.ಎಂ.ಎಲ್.ಸಾಮಗ ಅಭಿನಂದನಾ ಭಾಷಣ ಮಾಡಲಿದ್ದು, ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಮನೋರಮಾ ಎಂ.ಭಟ್ ಉಪಸ್ಥಿತರಿರು ವರು ಎಂದು ಕೇಂದ್ರ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ತಿಳಿಸಿದ್ದಾರೆ.