×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-03-06 22:32 IST

 ಉಡುಪಿ, ಮಾ.6: ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಬೈಲೂರು ಜಗನ್ನಾಥ ನಗರದ ರಾಮೋಜಿ ರಾವ್(65) ಎಂಬವರು ಮಾನಸಿಕವಾಗಿ ನೊಂದು ಮಾ.5ರಂದು ರಾತ್ರಿ ಮನೆಯ ಟೆರೇಸಿಗೆ ಹೋಗುವ ಮೆಟ್ಟಿಲುಗಳಿಗೆ ನಿರ್ಮಿಸಿದ ತಡೆಗೋಡೆಯ ಅಡ್ಡ ಸಿಮೆಂಟ್ ಕಟ್ಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ಉಡುಪಿಯ ಕೊಂಕಣ ರೈಲ್ವೆ ಇಲಾಖೆಯ ರೈಲ್ವೆ ಹಳಿಯ ದುರಸ್ಥಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಸಿಕಂದರ್(20) ಎಂಬವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.5ರಂದು ರಾತ್ರಿ ಕೆದೂರು ಎಂಬಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News