×
Ad

ಮಾ.7: ಮಂಗಳೂರಿಗೆ ಡಿಸಿಎಂ ಭೇಟಿ

Update: 2020-03-06 22:36 IST

ಮಂಗಳೂರು, ಮಾ.6: ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಸಿ.ಎಸ್. ಮಾ.7ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಮಾ.7ರಂದು ಬೆಳಗ್ಗೆ 8:50ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 9:30ಕ್ಕೆ ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಸ್ಟೇಟ್ ಕಾನ್ಫಫರೆನ್ಸ್- ಐಆರ್‌ಐಎ ಕರಾವಳಿ ಆರ್‌ಎಡಿಸಿಒಎನ್ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ 10:45ಕ್ಕೆ ನಗರದ ಪುರಭವನದಲ್ಲಿ ನಡೆಯುವ ಕರ್ನಾಟಕ ಪತ್ರಕರ್ತರ ಸಂಘದ 35ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News