ಕೊಪ್ಪ : ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ; ಇಬ್ಬರು ಮೃತ್ಯು

Update: 2020-03-07 05:12 GMT

ಕೊಪ್ಪ : ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಕುದುರೆಗುಂಡಿ ಬಳಿ ಶನಿವಾರ ಮುಂಜಾನೆ ನಡೆದಿದೆ.

ಮೃತರನ್ನು ಶಿವಮೊಗ್ಗದ ನಾಸಿರ್ ಹಾಗೂ ಮುಹಮ್ಮದ್ ಆರಿಫ್ ಎಂದು ಗುರುತಿಸಲಾಗಿದೆ.

ಶಿವಮೊಗ್ಗದಿಂದ ಕೊಪ್ಪಕ್ಕೆ ಬರುತ್ತಿದ್ದ ಕಾರು ಹಾಗೂ ಕೊಪ್ಪದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಇನೋವಾ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಕಾರಿನ ಚಾಲಕನಿಗೂ ಗಂಭೀರ ಗಾಯವಾಗಿದ್ದು ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಂಪೂರ್ಣ ನಜ್ಜು ಗುಜ್ಜಾಗಿದೆ.

ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News