21 ಮಂದಿಗೆ ಜಾಮೀನು ನೀಡಿದ್ದ ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Update: 2020-03-07 11:14 GMT

ಹೊಸದಿಲ್ಲಿ: ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ 21 ಮಂದಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.

ಇಷ್ಟೇ ಅಲ್ಲದೆ ಸಿಜೆಐ ಎಸ್.ಎ. ಬೊಬ್ಡೆ ನೇತೃತ್ವದ ಪೀಠವು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ಡಿಸೆಂಬರ್ 19ರಂದು ನಡೆದ ಹಿಂಸಾಚಾರದ ವೇಳೆ ಪೊಲೀಸ್ ಗೋಲಿಬಾರ್ ಗೆ ಇಬ್ಬರು ಬಲಿಯಾಗಿದ್ದಾರೆ.

ಸಾಕ್ಷ್ಯಾಧಾರಗಳ ಕೊರತೆಯ ಆಧಾರದಲ್ಲಿ ಕರ್ನಾಟಕ ಹೈಕೋರ್ಟ್ ಫೆಬ್ರವರಿ 18ರಂದು ಆರೋಪಿಗಳಿಗೆ ಜಾಮೀನು ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News