ನೆರೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ಆರೋಪ: ಗ್ರಾಮ ಲೆಕ್ಕಾಧಿಕಾರಿ ಬಂಧನ
Update: 2020-03-08 18:04 IST
ಹಾವೇರಿ, ಮಾ.8: ನೆರೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಸಮೀಪದ ದೇವಗಿರಿ ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಲಾಗಿದೆ. ಆನಂದ ದೇಸಾಯಿ ಬಂಧಿತ ಗ್ರಾಮ ಲೆಕ್ಕಾಧಿಕಾರಿ ಎಂದು ತಿಳಿದುಬಂದಿದೆ.
ಮೂಲ ಫಲಾನುಭವಿಗೆ ಪರಿಹಾರ ನೀಡದೆ, ನಕಲಿ ದಾಖಲೆ ಸೃಷ್ಟಿಸಿ, ಬೇರೆ ವ್ಯಕ್ತಿಗೆ ಪರಿಹಾರ ಮಂಜೂರು ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದ ಹಿನ್ನಲೆ ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.