'ವಾರ್ತಾ ಭಾರತಿ'ಯ ಇಮ್ತಿಯಾಝ್ ಶಾ ಸೇರಿ ಹಿರಿಯ ಪತ್ರಕರ್ತರಿಗೆ ರಾಜ್ಯ ಪ್ರಶಸ್ತಿ ಪ್ರದಾನ
Update: 2020-03-08 19:14 IST
ಮಂಗಳೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 'ವಾರ್ತಾ ಭಾರತಿ'ಯ ಇಮ್ತಿಯಾಝ್ ಶಾ ಸೇರಿ ಹಿರಿಯ ಪತ್ರಕರ್ತರಿಗೆ ಜೀವಮಾನದ ವೃತ್ತಿ ಸಾಧನೆಗಾಗಿ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ದತ್ತಿ ನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹಿರಿಯ ಪತ್ರಕರ್ತರಾದ ತಿಮ್ಮಪ್ಪ ಭಟ್, ಪದ್ಮರಾಜ ದಂಡಾವತಿ, ಜಿ.ಎನ್.ಮೋಹನ್, ಅಬ್ಬೂರ್ ರಾಜಶೇಖರ, ಪೆ.ನಾ. ಗೋಪಾಲರಾವ್, ಮಹೇಶ್ ಅಂಗಡಿ, ಮನೋಹರ ಪ್ರಸಾದ್, ಆನಂದ ಶೆಟ್ಟಿ ಸೇರಿದಂತೆ ಪ್ರಶಸ್ತಿ ವಿಜೇತರಿಗೆ ರಾಜ್ಯ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶಸ್ತಿ ವಿತರಿಸಿದರು.
ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ವಿಶೇಷ ಪ್ರಶಸ್ತಿ
ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲೆಯ ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ಆನಂದ ಶೆಟ್ಟಿ, ಡಾ.ಯು.ಪಿ.ಶಿವಾನಂದ ಅವರನ್ನು ವಿಶೇಷ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.