ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಮೋದಿ ಪ್ರಯತ್ನಿಸಲಿ: ದೇವೇಗೌಡ

Update: 2020-03-08 14:36 GMT

ಬೆಂಗಳೂರು, ಮಾ. 8: ‘ಮಹಿಳಾ ಮೀಸಲಾತಿ ಮಸೂದೆ’ಯನ್ನು ಜಾರಿ ಮಾಡಲು ಪ್ರಧಾನಿ ಮೋದಿ ಅವರು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕೋರಿದ್ದಾರೆ.

ರವಿವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ನಾನು 1996ರಲ್ಲಿ ಪ್ರಧಾನಿಯಾದ ಸಂದರ್ಭದಲ್ಲಿ ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ‘ಮಹಿಳಾ ಮೀಸಲಾತಿ’ಗಾಗಿ ಮಸೂದೆಯನ್ನು ಮಂಡನೆ ಮಾಡಿದ್ದೆ ಎಂದು ನೆನಪು ಮಾಡಿಕೊಂಡಿದ್ದಾರೆ.

‘ನಾಡಿನ ಸಮಸ್ತ ಮಹಿಳೆಯರಿಗೆ ವಿಶ್ವ ಮಹಿಳಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಮಹಿಳೆಯರು ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಪ್ರಬಲವಾದರೆ ಮಾತ್ರ ನಮ್ಮ ದೇಶ ಅಭಿವೃದ್ಧಿಯಾಗಲು ಸಾಧ್ಯ. ಈ ಕಾರಣದಿಂದ ನಾನು ಮುಖ್ಯಮಂತ್ರಿಯಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ, ಸರಕಾರಿ ಕೆಲಸಗಳಲ್ಲಿ ‘ಮಹಿಳಾ ಮೀಸಲಾತಿ’ಯನ್ನು ತಂದಿದ್ದೆ ಎಂದು ಅವರು ಸ್ಮರಿಸಿದ್ದಾರೆ.

‘ಸ್ವಾತಂತ್ರ್ಯ ಮತ್ತು ಸಮಾನತೆಯ ಮೂಲಕ ಮಹಿಳೆಯರಿಗೆ ಸಮಪಾಲು- ಸಮಬಾಳು ನೀಡಿದರೆ ಮಾತ್ರ ಪುರುಷ ಪ್ರದಾನ ವ್ಯವಸ್ಥೆಯನ್ನು ಮನುಷ್ಯ ಪ್ರಧಾನ ವ್ಯವಸ್ಥೆಯನ್ನಾಗಿ ಪರಿವರ್ತಿಸಲು ಸಾಧ್ಯ ಎಂದು ನಾನು ನಂಬಿದ್ದೇನೆ. ಒದಗಿಬಂದ ರಾಜಕೀಯ ಅಧಿಕಾರವನ್ನು ಈ ನಂಬಿಕೆಯಿಂದ ಬಳಸಿಕೊಂಡ ತೃಪ್ತಿ ನನ್ನದು’

-ಸಿದ್ದರಾಮಯ್ಯ ವಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News