×
Ad

ಅಂಜಾರು: ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಉದ್ಘಾಟನೆ

Update: 2020-03-08 21:18 IST

ಉಡುಪಿ, ಮಾ.8: ಸಂಘಟನೆಗಳು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಬೇಕು. ಬದಲಾಗುತ್ತಿರುವ ಇಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ಯುವ ಪೀಳಿಗೆಗೆ ಸಂಸ್ಕೃತಿ ಬಗ್ಗೆ ತಿಳಿಹೇಳಬೇಕೆಂದು ಅಂಜಾರು ಮಠ ಸೀತಾ ರಾಮ ಆಚಾರ್ಯ ಹೇಳಿದ್ದಾರೆ.

ಅಂಜಾರು ಶ್ರೀದುರ್ಗಾಪರಮೇಶ್ವರಿ ಮರಾಟಿ ಸಮುದಾಯ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಇತ್ತೀಚೆಗೆ ಅಂಜಾರಿನಲ್ಲಿ ಜರಗಿದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಜಿಲ್ಲಾ ಮರಾಟಿ ಸಂಘದ ಅಧ್ಯಕ್ಷ ಅನಂತ ನಾಯ್ಕ ವಹಿಸಿ ದ್ದರು. ಅತಿಥಿಗಳಾಗಿ ಕೊಡಿಬೆಟ್ಟು ಗ್ರಾಪಂ ಅಧ್ಯಕ್ಷ ರಾಜು ಪೂಜಾರಿ, ಇಂದಿರಾ ಎನ್.ನಾಯ್ಕ, ಕೃಷ್ಣ ಕರ್ಜೆ ಭಾಗವಹಿಸಿದ್ದರು. ಉಡುಪಿ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿದರು.

ವೇದಿಕೆಯಲ್ಲಿ ವಿಠಲ ನಾಯ್ಕ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ವೆಂಕಟೇಶ್ ನಾಯ್ಕ ಸ್ವಾಗತಿಸಿದರು. ಸುಧಾಕರ ನಾಯ್ಕ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News