ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸುವೆ: ಸಚಿವ ಬಿ.ಸಿ.ಪಾಟೀಲ್

Update: 2020-03-08 17:06 GMT

ಹಾವೇರಿ, ಮಾ 8: ಕ್ಷೇತ್ರದ ಜನತೆ ಭರವಸೆ ಇಟ್ಟು ನನಗೆ ನೀಡುವ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತೇನೆ ಅಲ್ಲದೆ, ಮೂರು ವರ್ಷಗಳ ಕಾಲ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಭರವಸೆ ನೀಡಿದ್ದಾರೆ.

ರವಿವಾರ ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಮಡ್ಲೂರು ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಗ್ರಾಮೀಣ ಗೋದಾಮು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಿರ್ಮಿಸಿರುವ ಅಂಗನವಾಡಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿತ್ತಿದ್ದರು.

ಉಪಚುನಾವಣೆಯಲ್ಲಿ ತಾವು ಮತ್ತು ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ್ ಒಗ್ಗಟ್ಟಾಗುವ ಮೂಲಕ ಕ್ಷೇತ್ರದ ಅಭಿವೃದ್ಧಿಯ ಪಣ ತೊಟ್ಟಿದ್ದೇವೆ. ಆ ನಿಟ್ಟಿನಲ್ಲಿ ತಾವು ಕಾರ್ಯ ಪ್ರವೃತ್ತರಾಗಿದ್ದೇವೆ. ಸರ್ವಜ್ಞನ ನಾಡಿನಲ್ಲಿ ಹೇಳಿದಂತೆ ನಡೆಯಬೇಕು. ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಅಭಿವೃದ್ಧಿಯೇ ನಮ್ಮ ಮೂಲ ಮಂತ್ರ ಎಂದರು.

ಎಸ್ಸಿ-ಎಸ್ಟಿ ಅನುದಾನದಲ್ಲಿ ವಾಲ್ಮೀಕಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹಾಗೂ ರಸ್ತೆ ಅಭಿವೃದ್ಧಿಗೆ ಕ್ಷೇತ್ರದ ಜನರು ಮನವಿ ಸಲ್ಲಿಸಿದ್ದು, ಆದ್ಯತೆ ಮೇರೆಗೆ ಕೆಲಸ ನಿರ್ವಹಿಸಲಾಗುವುದು. ಪ್ರಾಧಿಕಾರಕ್ಕಿಂತ ರಸ್ತೆಗಳ ಅಭಿವೃದ್ಧಿ ಮೂಲಭೂತ ಸೌಕರ್ಯ ಕಲ್ಪಿಸುವುದು ನಮ್ಮ ಆದ್ಯತೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News